ಮಂಡ್ಯ: ಕೋಲಾರದ ವಸತಿ ಶಾಲಾ ಮಕ್ಕಳಿಂದ ಮಲಗುಂಡಿ ಸ್ವಚ್ಛಗೊಳಿಸಿದ ಘಟನೆ ಖಂಡಿಸಿ ಮಂಡ್ಯದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರಿಂದ ಅರೆ ಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ಡಿಸಿ ಕಚೇರಿ ಬಳಿ ಡಿಎಸ್ ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕರಾಳ ದಂಧೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ರಾಜ್ಯ ಸರ್ಕಾರ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಪ್ರಕರಣದ ಎಲ್ಲಾ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸುವ ಕಾನೂನು ಜಾರಿಗೊಳಿಸಬೇಕು. ಕೋಲಾರದ ಯಲಹಳ್ಳಿ ಮೊರಾರ್ಜಿ ವಸತಿ ಶಾಲಾ ಮಕ್ಕಳಿಂದ ಮಲಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ನೈತಿಕ ಹೊಣೆ ಹೊತ್ತು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆ ನೀಡಬೇಕು. ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಸೇವೆಯಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯ ವಂಟಮೂರು ಗ್ರಾಮದಲ್ಲಿ ಮಹಿಳೆ ವಿವಸ್ತ್ರ ಗೊಳಿಸಿ ಅಮಾನುಷವಾಗಿ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗಳಿನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ತ ಮಹಿಳೆಗೆ ಕನಿಷ್ಠ 25 ಲಕ್ಷ ಪರಿಹಾರ ಜೊತೆಗೆ ಪುರ್ನವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.