Sunday, April 20, 2025
Google search engine

Homeರಾಜ್ಯಸುದ್ದಿಜಾಲನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಖಾಸಗಿ ಕಟ್ಟಡ ನವೀಕರಣ

ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಖಾಸಗಿ ಕಟ್ಟಡ ನವೀಕರಣ

ಯಳಂದೂರು: ಪಟ್ಟಣದ ಬಸ್ ನಿಲ್ದಾಣದ ರಸ್ತೆಯಲ್ಲೇ ಇರುವ ಖಾಸಗಿ ವ್ಯಕ್ತಿಯೊಬ್ಬರ ಕಟ್ಟಡ ತೆರವುಗೊಳಿಸದೆ ಇರುವ, ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಖಾಸಗಿ ವ್ಯಕ್ತಿಯೊಬ್ಬರ ಕಟ್ಟಡ ನವೀಕರಣ ಕಾಮಗಾರಿ ನಡೆಯುತ್ತಿದ್ದರೂ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ೨೦೧೬ರಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೯ ರ ಅಗಲೀಕರಣ ಮಾಡುವ ವೇಳೆ ಪಟ್ಟಣದ ಮುಖ್ಯ ರಸ್ತೆಯ ಎಲ್ಲಾ ಅಂಗಡಿಗಳನ್ನು ರಸ್ತೆ ಅಗಲೀಕರಣಕ್ಕಾಗಿ ತೆರವುಗೊಳಿಸಲಾಗಿತ್ತು.

ಇದೆ ರೀತಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಪಕ್ಕದಲ್ಲಿ ನರಸಮ್ಮ ಲೇ.ಬಿ.ಮಹದೇವಪ್ಪ ಎಂಬುವರಿಗೆ ಸೇರಿರುವ ಅಂಗಡಿ ಮಳಿಗೆ ತೆರವುಗೊಳಿಸಲು ಹೋದ ಸಂದರ್ಭದಲ್ಲಿ ಇವರು ನ್ಯಾಯಾಲದಿಂದ ತಡೆ ಅಜ್ಞೆ ತಂದು ಅವರ ರಸ್ತೆಯ ಅಗಲಿಕರಣಕ್ಕೆ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ. ಆದರೆ ಈ ಸಂದರ್ಭದಲ್ಲಿ ಭಾಗಶಃ ಹಾನಿಗೊಳಗಾಗಿದ್ದ ಕಟ್ಟಡದ ಕಾಮಗಾರಿಯನ್ನು ಇವರು ಈಗ ನವೀಕರಣಗೊಳಿಸುತ್ತಿದ್ದಾರೆ. ಈ ಕಟ್ಟಡ ವಾಣಿಜ್ಯ ಮಳಿಗೆಯಾಗಿದ್ದು ಇಲ್ಲಿ ಮಾಹೆಯಾನ ಲಕ್ಷಾಂತರ ರೂ. ಲಾಭ ಇರುವ ಉದ್ದೇಶದಿಂದ ರಾತ್ರೋರಾತ್ರಿ ಕಾಮಗಾರಿ ನಡೆಯುತ್ತಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಕೆಲ ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.


ಕಣ್ಣು ಮುಚ್ಚಿ ಕುಳಿತ ಪಪಂ ಅಧಿಕಾರಿಗಳು:
ಇಲ್ಲಿರುವ ಅಂಗಡಿಗಳ ಕಾಮಗಾರಿಯನ್ನು ಟಾರ್ಪಲ್ ಹಾಕಿ ರಾಜಾರೋಷವಾಗಿ ಹಗಲು ರಾತ್ರಿ ನವೀಕರಣ ಮಾಡಲಾಗುತ್ತಿದೆ. ಆದರೆ ಇದನ್ನು ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ ಎಂದು ಸಾರ್ವಜನಿಕರ ದೂರಾಗಿದೆ. ಅಲ್ಲದೆ ಈ ಕಟ್ಟಡ ಬಸ್ ನಿಲ್ದಾಣದಲ್ಲಿದೆ. ಇಲ್ಲಿರುವ ಅಂಗಡಿಗಳಿಂದ ಪ್ರತಿ ತಿಂಗಳು ಲಕ್ಷಾಂತರ ರೂ. ಅದಾಯವಿದೆ. ಆದರೆ ಇಲ್ಲಿರುವ ಅಂಗಡಿಗಳಿಗೆ ಪಂಚಾಯಿತಿ ವತಿಯಿಂದ ಪರವಾನಿಗೆ ಪಡೆದಿಲ್ಲ. ಕಾನೂನು ಬಾಹಿರವಾಗಿ ಹಲವು ವರ್ಷಗಳಿಂದ ಅಂಗಡಿಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳು ಈ ಅಂಗಡಿ ಮಾಲೀಕರ ಮೇಲೆ ಶಿಸ್ತು ಕ್ರಮ ವಹಿಸಿಲ್ಲ. ಇದರಿಂದ ಪಂಚಾಯಿತಿಗೆ ಆದಾಯ ಖೋತಾ ಆಗುವ ಜೊತೆಗೆ ಅಕ್ರಮಕ್ಕೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ಸೋತಿದ್ದಾರೆ ಎಂಬುದು ಸಾರ್ವಜನಿಕರ ದೂರಾಗಿದೆ.


ಜಿಲ್ಲಾಧಿಕಾರಿಗಳಿಗೆ ದೂರು: ಇದಕ್ಕೆ ಸಂಬಂಧಿಸಿದಂತೆ ನಾಗರೀಕ ಹಿತರಕ್ಷಣ ಹೋರಾಟ ಸಮಿತಿ ಸದಸ್ಯರು ದೂರು ನೀಡಿದ್ದಾರೆ. ರಸ್ತೆ ಬದಿಯಲ್ಲೇ ಇರುವ ಈ ಕಟ್ಟಡವನ್ನು ತೆರವುಗೊಳಿಸಬೇಕು. ನ್ಯಾಯಾಲಯದ ತಡೆಯಾಜ್ಞೆ ಪ್ರತಿಯನ್ನು ಇಟ್ಟುಕೊಂಡು ಇವರು ಹಲವು ವರ್ಷಗಳಿಂದಲೂ ಕಾನೂನು ಬಾಹಿರ ಚಟುವಟಿಕೆಯನ್ನು ನಡೆಸುತ್ತಿದ್ದಾರೆ. ಈ ಕಟ್ಟಡದ ಅನತಿ ದೂರದಲ್ಲೇ ಡಿವೈಡರ್ ಇದ್ದು ಇಲ್ಲಿ ಹಲವು ವಾಹನಗಳು ಅಪಘಾತಕ್ಕೊಳಗಾಗಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ, ಕೆಲವರು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ವ್ಯಾಜ್ಯ ಜಿಲ್ಲಾಧಿಕಾರಿಗಳ ನ್ಯಾಯಾಯಲದಲ್ಲಿ ಇದೆ. ರಸ್ತೆ ಅಗಲೀಕರಣದ ವೇಳೆ ಎಲ್ಲಾ ಅಂಗಡಿಗಳನ್ನು ತೆರವುಗೊಳಿಸಿ ಇದನ್ನು ಹಾಗೆ ಬಿಡಲಾಗಿದೆ, ಈಗ ಇದರ ಮಾಲೀಕರಾದ ಲೇ. ಬಿ.ಪಿ. ಮಹದೇವನಾಯಕ ರವರ ಕುಟುಂಬ ರಾತ್ರೋರಾತ್ರಿ ಅಕ್ರಮವಾಗಿ ಕಟ್ಟಡ ನವೀಕರಣ ಮಾಡಲಾಗಿದ್ದು ಇದು ಕಾನೂನಿನ ಉಲ್ಲಂಘನೆಯಾಗಿದೆ. ಈ ಬಗ್ಗ ಜಿಲ್ಲಾಧಿಕಾರಿ ಹಾಗೂ ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಲಾಗಿದೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾಗರೀಕ ಹೋರಾಟ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮೀರೆ ಸಿದ್ದರಾಜು ಸೇರಿದಂತೆ ಅನೇಕರ ಆಗ್ರಹವಾಗಿದೆ.

ಮಹೇಶ್‌ಕುಮಾರ್, ಮುಖ್ಯಾಧಿಕಾರಿ ಪಪಂ ಯಳಂದೂರು: ಇಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಯುತ್ತಿರುವ ಬಗ್ಗೆ ಪಂಚಾಯಿತಿಗೆ ದೂರು ಬಂದಿದೆ. ಕೂಡಲೇ ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಕಾನೂನು ಕ್ರಮ ವಹಿಸಲಾಗುವುದು.

RELATED ARTICLES
- Advertisment -
Google search engine

Most Popular