Saturday, April 19, 2025
Google search engine

Homeಬ್ರೇಕಿಂಗ್ ನ್ಯೂಸ್ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಜಿಪಂ ಮಾಜಿ ಅಧ್ಯಕ್ಷ ಸಾ.ರಾ.ನಂದೀಶ್ ರಾಜೀನಾಮೆ

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಜಿಪಂ ಮಾಜಿ ಅಧ್ಯಕ್ಷ ಸಾ.ರಾ.ನಂದೀಶ್ ರಾಜೀನಾಮೆ

ಕೆ.ಆರ್.ನಗರ: ಮೈಸೂರು ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮತ್ತು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಜಿ.ಪಂ.ಮಾಜಿ ಅಧ್ಯಕ್ಷ ಸಾ.ರಾ.ನಂದೀಶ್ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಾತ್ಯಾತೀತ ಜನತಾದಳ ಪಕ್ಷದಲ್ಲಿ ಸುಮಾರು 18 ವರ್ಷಗಳ ಕಾಲ ನನ್ನ ಕೈಲಾದ ಸೇವೆಯನ್ನು ಮಾಡಿಕೊಂಡು ಬಂದಿದ್ದು, ಪಕ್ಷವು ಸಹ ನನ್ನನ್ನು ಗುರುತಿಸಿ ಜಿಲ್ಲಾ ಪಂಚಾಯಿತಿಗೆ ಸ್ಪರ್ಧಿಸಲು ಟಿಕೇಟ್ ನೀಡಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಲು ಅವಕಾಶ ಮಾಡಿಕೊಟ್ಟಿದ್ದು, ಸಂತೋಷ ತಂದಿದೆ. ಆದರೇ, ಈಗ ರಾಜಕೀಯದಿಂದ ದೂರ ಉಳಿಯಲು ಇಚ್ಚಿಸಿದ್ದು, ಯಾರು ದೇಶದ ಅಭಿವೃದ್ಧಿಗೋಷ್ಠರ ಹಾಗೂ ಜನರ ಏಳಿಗೆಗಾಗಿ ಸೇವೆ ಸಲ್ಲಿಸಲು ಪಣತೊಡುವರು, ಅಂತಹವರಿಗೆ ಯಾವುದೇ ಸ್ವಾರ್ತವಿಲ್ಲದೇ ನಿಸ್ವಾರ್ಥದಿಂದ ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ವ್ಯಕ್ತಿಗತವಾಗಿ ಸೇವೆ ಸಲ್ಲಿಸಲು ತೀರ್ಮಾನಿಸಿರುವುದರಿಂದ, ನನ್ನ ಕೊನೆಯ ಅಂತ್ಯದವರೆಗೂ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಪ್ರಮಾಣೀಸುತ್ತಾ ಈ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದು ನನ್ನ ಮಾನಸಿಕ ಒಳ ಒತ್ತಡದಿಂದ ತೆಗೆದುಕೊಂಡಿರುವ ನಿರ್ಧಾರವೇ ಹೊರತು, ಬೇರೆ ಯಾರು ಸಹ ಕಾರಣರಾಗಿರುವುದಿಲ್ಲ ಎಂದು ಸ್ಪಷ್ಟವಾಗಿ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular