ಮಂಡ್ಯ: ಸೇವಾ ಖಾಯಂಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಮಂಡ್ಯದ ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ
ಶಿಕ್ಷಕರಿಲ್ಲದೆ ತರಗತಿಗಳು ನಡೆಯದ ಹಿನ್ನಲೆ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ.
ತರಗತಿ ಬಹಿಷ್ಕಾರಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಅತಿಥಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದು, ಉಪನ್ಯಾಸಕರ ಸೇವಾ ಖಾಯಂ ಗೆ ಆಗ್ರಹಿಸಿದ್ದಾರೆ.
ಈ ಹಿನ್ನಲೆ ವಿದ್ಯಾರ್ಥಿಗಳು ಉಪನ್ಯಾಸಕರ ಪರ ನಿಂತಿದ್ದು, ಉಪನ್ಯಾಸಕರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಆಗ್ರಹಿಸಿ ಪ್ರತಿಭಟಿಸಿದ್ದಾರೆ.