ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಡಿ. ೨೨ ರಂದು ಸಂಜೆ ೫:೩೦ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ-೨೦೨೩ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಘನ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪನವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಟಿ ಎಸ್ ಶ್ರೀವತ್ಸ ವಹಿಸುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್, ಸುಮಲತಾ ಅಂಬರೀಶ್ ಅವರು ಭಾಗವಹಿಸುವರು. ಸಮಾರಂಭದ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್, ಅನಿಲ್ ಕುಮಾರ್ ಸಿ, ಜಿ.ಟಿ ದೇವೇಗೌಡ, ರವಿಶಂಕರ್ ಡಿ, ಕೆ.ಹರೀಶ್ ಗೌಡ, ದರ್ಶನ್ ಧೃವನಾರಾಯಣ್, ಜಿ.ಡಿ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇ ಗೌಡ, ಹೆಚ್ ವಿಶ್ವನಾಥ್, ಡಾ. ಡಿ ತಿಮ್ಮಯ್ಯ, ಮಧು ಜಿ ಮಾದೇಗೌಡ ಹಾಗೂ ಸಿ.ಎನ್ ಮಂಜೇಗೌಡ ಭಾಗವಹಿಸುವರು ಎಂದು ಮೈಸೂರು ಅರಮನೆ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.