ಚಿತ್ರದುರ್ಗ: ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಬುಧವಾರ ಹೊಸದುರ್ಗ ತಾಲ್ಲೂಕಿನ ನಗರ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಲಾಯಿತು. ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 22 ಕೇಸುಗಳನ್ನು ದಾಖಲಿಸಿ ರೂ. 2200 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 08 ಕೇಸುಗಳನ್ನು ದಾಖಲಿಸಿ ರೂ. 800 ದಂಡವನ್ನು ವಸೂಲಿ ಮಾಡಲಾಯಿತು. ತಂಬಾಕು ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರತಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿದ್ದರಾಮಪ್ಪ, ಪಿ.ಅಶೋಕ್, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಹೆಚ್.ಎಲ್.ಕಿರಣ್, ಪೊಲೀಸ್ ಇಲಾಖೆಯ ಬೀರೇಶ್ ಇದ್ದರು.