ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಡಿಸೆಂಬರ್ ೨೩ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ ೨.೪೫ ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಮಧ್ಯಾಹ್ನ ೩ ಗಂಟೆಗೆ ಕೊಳ್ಳೇಗಾಲದ ಪ್ರವಾಸಿಮಂದಿರದ ಸಭಾಂಗಣದಲ್ಲಿ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖಾ ಅಧಿಕಾರಿಗಳೊಂದಿಗೆ ಕೊಳ್ಳೇಗಾಲದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಕುರಿತು ಸಭೆ ನಡೆಸುವರು. ಬಳಿಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.