ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಾಲು ದರ ಏರಿಕೆ ಕುರಿತಂತೆ ಸ್ಪಷ್ಟನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಂದಿನಿ ಮೊಸರು, ನಂದಿನಿ ಎಮ್ಮೆ ಹಾಲು ಮತ್ತಿತರ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರು ಜಾಹಿರಾತು ಬಿಡುಗಡೆಗೊಳಿಸಿದರು. ಸಚಿವ ಮಧು ಬಂಗಾರಪ್ಪ, ಗೀತಾ ಶಿವರಾಜ್ ಕುಮಾರ್, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಭೀಮಾನಾಯ್ಕ್, ಹಿಂದಿನಿಂದಲೂ ರಾಜ್‌ಕುಮಾರ್ ಕುಟುಂಬದವರನ್ನೇ ನಂದಿನಿ ರಾಯಭಾರಿಯನ್ನಾಗಿ ಮಾಡಲಾಗುತ್ತಿದೆ. ಪುನಿತ್ ರಾಜ್‌ಕುಮಾರ್ ಅವರು ನಂದಿನಿ ರಾಯಭಾರಿ ಆಗಿದ್ದರು. ಈಗ ಡಾ.ಶಿವ ರಾಜ್‌ಕುಮಾರ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದೇವೆ. ನಮ್ಮ ಮನವಿಗೆ ಅವರು ಮನವಿಗೆ ಸ್ಪಂದಿಸಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಶಿವ ರಾಜ್‌ಕುಮಾರ್ ಅವರನ್ನು ಸನ್ಮಾನಿಸಿದರು ಎಂದರು.
ನಟ ಶಿವ ರಾಜ್‌ಕುಮಾರ್ ಮಾತನಾಡಿ, ನಂದಿನಿ ಉತ್ಪನ್ನಗಳು ಚೆನ್ನಾಗಿವೆ. ಹೊಸ ಉತ್ಪನ್ನ ಬಿಡುಗಡೆಯ ಟೀಸರ್ ಕೂಡಾ ಬಿಡುಗಡೆಯಾಗಿದೆ ಎಂದರು. ಇನ್ನು, ಕೆಸಿಸಿಯಲ್ಲಿ ಪಾಲ್ಗೊಳ್ಳಲು ಸಿಎಂಗೆ ಆಹ್ವಾನ ನೀಡಿದ್ದೇನೆ. ಕ್ರಿಸ್ಮಸ್ ದಿನ ಬರುವುದಕ್ಕೆ ಆಹ್ವಾನ ನೀಡಿದ್ದೇನೆ ಎಂದು ಅವರು ತಿಳಿಸಿದರು.