ಮೈಸೂರು : ಕರ್ನಾಟಕ ರಾಜ್ಯ ರೈತಸಂಘ (ರೈತಬಣ), ಹಾಗೂ ರೈತ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಬೆಳಿಗ್ಗೆ ನಗರದ ಪುರಭವನದಲ್ಲಿ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ನಾಳೆ ಬೆಳಗ್ಗೆ ೧೦.೩೦ಕ್ಕೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ರೈತರು ಮೆರವಣಿಗೆ ಮೂಲಕ ಪುರಭವನಕ್ಕೆ ಆಗಮಿಸುವರು.
ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್ ಸೇರಿದಂತೆ ಹಲವು ಶಾಸಕರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಹಿರಿಯ ರೈತರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಇಂಗಲಕುಪ್ಪೆ ಕೃಷ್ಣೇಗೌಡ ತಿಳಿಸಿದ್ದಾರೆ.