Monday, April 21, 2025
Google search engine

Homeರಾಜ್ಯಮಂಡ್ಯದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ: ಮಹತ್ವದ ಸಭೆಯಲ್ಲಿ ಭಾಗವಹಿಸಲು ಜನಪ್ರತಿನಿಧಿಗಳು, ಅಧಿಕಾರಿಗಳ ನಿರಾಸಕ್ತಿ

ಮಂಡ್ಯದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ: ಮಹತ್ವದ ಸಭೆಯಲ್ಲಿ ಭಾಗವಹಿಸಲು ಜನಪ್ರತಿನಿಧಿಗಳು, ಅಧಿಕಾರಿಗಳ ನಿರಾಸಕ್ತಿ

ಮಂಡ್ಯ: ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನ ಕಾವೇರಿ ಸಭಾಂಗಣದಲ್ಲಿ  ನಡೆಯುತ್ತಿದೆ.

ಸಭೆಯಿಂದ ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹೊರ ಉಳಿದಿದ್ದಾರೆ.

ಪ್ರತಿ ಸಭೆಯಲ್ಲೂ ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸ್ತಿದ್ದರು. ಆದರೆ ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆ ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ನೀರಾವರಿ ಸಲಹಾ ಸಮಿತಿ ಸಭೆಯಿಂದ ದೂರ ಉಳಿದಿದ್ದಾರೆ.

ಸಭೆಗೆ ತಡವಾಗಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಡವಾಗಿ ಆಗಮಿಸಿದ್ದಾರೆ.

ಕುಡಿಯುವ ನೀರು ಪೂರೈಸುವ, ರೈತರು ಬೆಳೆದ ಬೆಳೆಗಳಿಗೆ ನೀರೊದಗಿಸುವ ಸಂಬಂಧ ನಡೆಯುತ್ತಿರುವ ಮಹತ್ವದ ಸಭೆ ಇದಾಗಿದೆ.

ಸಭೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ್, ನೀರಾವರಿ ಇಲಾಖೆ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದಾರೆ..

RELATED ARTICLES
- Advertisment -
Google search engine

Most Popular