Tuesday, April 22, 2025
Google search engine

Homeಅಪರಾಧಮನೆ ಮುಂದೆ ಆಟವಾಡುತ್ತಿದ್ದ ಮಗು ನೀರಿನ ಸಂಪ್ ಗೆ ಬಿದ್ದು ಸಾವು

ಮನೆ ಮುಂದೆ ಆಟವಾಡುತ್ತಿದ್ದ ಮಗು ನೀರಿನ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಮೃತ ಮಗು.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುವಾಗ ಬಾಗಿಲು ತೆರೆದಿದ್ದ ಸಂಪ್‌ ಗೆ ಬಿದ್ದು ನೀರಿನಲ್ಲಿ ಮುಳುಗಿ ಅಸ್ವಸ್ಥವಾಗಿತ್ತು. ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಿಸದೆ ತಡರಾತ್ರಿ ಮಗು ಮೃತಪಟ್ಟಿದೆ ಎಂದು ಪೊಲೀಸರು ಹೇಳಿದರು.

ಚಿತ್ರದುರ್ಗ ಮೂಲದ ಸೈಯದ್‌ ಹುಸೇನ್‌ ದಂಪತಿಗೆ ನಾಲ್ವರು ಮಕ್ಕಳು. ಈ ಪೈಕಿ ಮೃತ ಸಾಯಿದಾ ನಾಲ್ಕನೇ ಮಗು. ಗಾರೆ ಕೆಲಸ ಮಾಡುವ ಸೈಯದ್‌ ಕೆಲ ವರ್ಷಗಳಿಂದ ಕುಟುಂಬದ ಜತೆ ಬಾಗಲಗುಂಟೆಯಲ್ಲಿ ವಾಸವಾಗಿದ್ದಾರೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಕುಟುಂಬದ ಸದಸ್ಯರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಮಗು ಸಾಯಿದಾ ಆಟವಾಡಲು ಮನೆಯಿಂದ ಹೊರಗೆ ಬಂದಿದ್ದಾಳೆ. ಈ ವೇಳೆ ಮನೆ ಎದುರಿನ ಸಂಪ್‌ ಬಾಗಿಲು ತೆರೆದಿದ್ದು, ಸಾಯಿದಾ ಅದರೊಳಗೆ ಬಿದ್ದು ನೀರಿನಲ್ಲಿ ಮುಳುಗಿದ್ದಾಳೆ.

ಇದೇ ಸಮಯಕ್ಕೆ ಆಕೆಯ ತಾತ ಮನೆಯಿಂದ ಹೊರಗೆ ಬಂದಿದ್ದು. ಸಾಯಿದಾಗಾಗಿ ಹುಡುಕಾಡಿದ್ದಾರೆ. ಎಲ್ಲೂ ಪತ್ತೆಯಾಗಿಲ್ಲ. ಬಳಿಕ ಸಂಪ್‌ ಬಳಿ ಬಂದು ನೋಡಿದಾಗ ಸಾಯಿದಾ ನೀರಿನಲ್ಲಿ ಬಿದ್ದು ಒದ್ದಾಡುತ್ತಿದ್ದಳು. ಕೂಡಲೇ ಆಕೆಯನ್ನು ಮೇಲಕ್ಕೆ ಎತ್ತಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫ‌ಲಿಸದೆ ಸಾಯಿದಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular