ಮಂಡ್ಯ: ದಲಿತ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ನೀಡಲಾಗುವ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ” ಗೆ ಜನೋದಯ ಪತ್ರಿಕೆ ಸಂಪಾದಕಿ ಮಂಜುಳ ಕಿರುಗಾವಲು ಅವರನ್ನು ಆಯ್ಕೆ ಮಾಡಲಾಗಿದೆ.
ಸಂಘಟನೆ ವತಿಯಿಂದ ಪ್ರತಿವರ್ಷದ ಜನವರಿ 03 ರಂದು ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ಜಯಂತಿ ಪ್ರಯುಕ್ತ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕಲೆ ಸಾಹಿತ್ಯ, ಹೋರಾಟ, ಸಮಾಜ ಸೇವೆ ಅಲ್ಲದೇ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿ ಗೌರವಿಸುವ ರಾಜ್ಯ ಮಟ್ಟದ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ” ಪ್ರಶಸಿಯನ್ನು ನೀಡುತ್ತಾ ಬಂದಿದೆ.

ಅಂತೆಯೇ ಮಾತೆ ಸಾವಿತ್ರಿಬಾಯಿ ಪುಲೆ ಅವರ 194ನೇ ಜನ್ಮ ಜಯಂತಿ ಆಚರಣೆ ನಿಮಿತ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಕುರಿತು ದಲಿತ ವಿದ್ಯಾರ್ಥಿ ಪರಿಷತ್ ನ ಆಯ್ಕೆ ಸಮಿತಿ ಸಭೆಯಲ್ಲಿ 2024ನೇ ಸಾಲಿನ ಇತ್ತೀಚಿಗೆ ನಡೆದ ‘ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ”ಗೆ ಮಂಜುಳಾ ಕಿರಗಾವಲು ಅವರನ್ನು ಆಯ್ಕೆ ಮಾಡಲಾಗಿದೆ.
ಈ ಮೇಲ್ಕಂಡ ಪ್ರಶಸ್ತಿ ಸಮಾರಂಭವು ಮಾತೆ ಸಾವಿತ್ರಿಬಾಯಿ ಪುಲೆ ಅವರ ಜನ್ಮ ಜಯಂತಿ ಜನವರಿ 03 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಜಯಪುರ (ಬಿಜಾಪುರ) ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಸದರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರೀಯ ಮತ್ತು ನಾಡಿನ ಗಣ್ಯರು ಉಪಸ್ಥಿತರಿರಲಿದ್ದು, ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.