ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜೆ ಗ್ರಾಮದಲ್ಲಿ ನಡೆದಿದೆ.
ಹೊಂಡದಲ್ಲಿ ಈಜಲು ತೆರಳಿದ್ದ ನಾಗರಾಜ (11), ಹೇಮಂತ (12) ಎಂಬ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ರವಿವಾರ ಸಂಜೆ ಗ್ರಾಮದ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿದ್ದು, ತಡರಾತ್ರಿ ಗ್ರಾಮಸ್ಥರು ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.
ಈ ದುರ್ಘಟನೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.