ಮೈಸೂರು: ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್ ಮೂರ್ತಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿರುವ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮೈಸೂರು – ಕೊಡಗು, ಲೋಕಸಭಾ ಚುನಾವಣೆಗೆ ಆಕಾಂಕ್ಷಿಯಾಗಿರುವ ಕಾಂಗ್ರೆಸ್ಸಿನ ಹಿರಿಯ ಮುಖಂಡ ಗುರುಪಾದ ಸ್ವಾಮಿ ಸನ್ಮಾನಿಸಿದರು.
ಸನ್ಮಾನಿಸಿ ಮಾತನಾಡಿದ ಗುರುಪಾದ ಸ್ವಾಮಿಯವರು, ಮೂರ್ತಿಯವರು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ಐದು ದಶಗಳಿಂದ ಪಕ್ಷ ಹಾಗೂ ಸರ್ಕಾರದಲ್ಲಿ ಅಧ್ಯಕ್ಷರು ಹಾಗೂ ವಿವಿಧ ಜವಾಬ್ದಾರಿಗಳನ್ನ ಪ್ರಾಮಾಣಿಕೆಯಿಂದ ನಿರ್ವಹಿಸಿ ಒಳ್ಳೆಯ ನಾಯಕರಾಗಿದ್ದಾರೆ. ಇವರು ಇನ್ನು ಹೆಚ್ಚಿನ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಲು ಇವರಿಗೆ ಇನ್ನು ಹೆಚ್ಚಿನ ಅಧಿಕಾರ ಸರ್ಕಾರದಲ್ಲಿ ಲಭಿಸಲಿ ಎಂದು ಹೇಳಿದರು.
ಭಗವಂತ ಇವರಿಗೆ ಹೆಚ್ಚಿನ ಆಯಸ್ಸು ಹಾಗೂ ಆರೋಗ್ಯವನ್ನು ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.
ಪಕ್ಷಕ್ಕಾಗಿ ಪ್ರಾಮಾಣಿವಾಗಿ ಅನೇಕ ವರ್ಷಗಳಿಂದ ದುಡಿದಿರುವ, ನಿಷ್ಠಾವಂತ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಉಸ್ತುವಾರಿ ಸಚಿವರುಗಳ ಗಮನಕ್ಕೆತಂದು ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳಲ್ಲಿ ಅಧ್ಯಕ್ಷರನ್ನಾಗಿ ಹಾಗೂ ಸದಸ್ಯಗಳನ್ನಾಗಿ ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಲ್ಲದೆ ಮುಂಬರುವ ಸ್ಥಳೀಯ ಸಂಸ್ಥೆಗಳಲ್ಲಿ ನಗರ ಪಾಲಿಕೆ, ಪುರಸಭೆ, ನಗರ ಸಭೆ, ಪಟ್ಟಣ ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಅಭ್ಯರ್ಥಿಗಳಾಗಲು ಅವಕಾಶಗಳನ್ನು ಮಾಡುವುದರ ಮುಖಾಂತರ ನಿಷ್ಠಾವಂತ ಕಾಂಗ್ರೆಸ್ ಕಾಂಗ್ರೆಸ್ ಮುಖಂಡರುಗಳಿಗೆ ಹಾಗೂ ಕಾರ್ಯಕರ್ತಗಳಿಗೆ ಸಹಾಯವನ್ನು ಮಾಡಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ನಾಗಭೂಷಣ್ ತಿವಾರಿ, ಕೆಪಿಸಿಸಿ ಸಂಯೋಜಕಗಳಾದ ಎನ್ಎಸ್ ರಾಜೇಂದ್ರ, ಸಿ ಎಸ್ ರಘು, ನಾಗರಾಜ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವಣ್ಣ, ಶಿವಮಲ್ಲು , ಗಿರೀಶ, ಎಲ್ ಭಾಸ್ಕರ್, ಚಂದ್ರು,ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪಲತಾ ಚಿಕ್ಕಣ್ಣ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಮೇಶ್, ಪರಿಶಿಷ್ಟ ಪಂಗಡದ ವಿಭಾಗದ ಅಧ್ಯಕ್ಷರಾದ ರೋಹಿತ್, ನಗರ ಜಿಲ್ಲಾ ಕಾಂಗ್ರೆಸ್ ಸೇವಾದಳ ಮುಖ್ಯ ಸಂಘಟಿಕರಾದ ಅಶೋಕ, ಮಹಿಳಾ ಮುಖಂಡರುಗಳಾದ ಲತಾ ಮೋಹನ್, ಸುಶೀಲಾ ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷರಾದ ಎನ್ ಆರ್ ನಾಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಲ್ ಭಾಸ್ಕರ್, ಡೈರಿ ವೆಂಕಟೇಶ್, ಹುಲ್ಲಿನ ಬೀದಿ ಶಿವಕುಮಾರ್ ಮುಂತಾದವರು ಆರ್ ಮೂರ್ತಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು.