ಹಾವೇರಿ: ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್’ನ್’ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ ತಹಶಿಲ್ದಾರ ಮತ್ತಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.