Wednesday, April 23, 2025
Google search engine

Homeರಾಜ್ಯಹೊಸ ವರ್ಷಾಚರಣೆ: ಬೆಂಗಳೂರು ಪ್ರಮುಖ ರಸ್ತೆಗಳು ಸಂಚಾರಕ್ಕೆ ನಿರ್ಬಂಧ

ಹೊಸ ವರ್ಷಾಚರಣೆ: ಬೆಂಗಳೂರು ಪ್ರಮುಖ ರಸ್ತೆಗಳು ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಹೊಸ ವರ್ಷಚರಣೆ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು, ವಾಹನ ಸವಾರರು ಮತ್ತು ಪಾದಚಾರಿಗಳು ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಳ್ಳುವುದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಕೆಲ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಂಡಿದ್ದಾರೆ.

ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ಡಿ. ೩೧ರ ರಾತ್ರಿ ೧೧ಗಂಟೆಯಿಂದ ಜ. ೧ರ ಬೆಳಿಗ್ಗೆ ೬ ಗಂಟೆಯವರೆಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ ಹೊರತು ಪಡಿಸಿ ನಗರದ ಎಲ್ಲ ಮೇಲ್ಸೇತುವೆಗಳ ಮೇಲೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವೀಲಿಂಗ್ /ಡ್ರ್ಯಾಗ್ ರೇಸ್‌ನಲ್ಲಿ ಭಾಗಿಯಾಗಿ ಇತರ ಸಾರ್ವಜನಿಕರಿಗೆ ಅನಾನುಕೂಲ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮತ್ತು ಇಂತಹ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ ೧೧೨ ಗೆ ಮಾಹಿತಿ ನೀಡಲು ಕೋರಲಾಗಿದೆ.

ಅಲ್ಲದೆ ಸ್ನೇಹಿತರು ಗುಂಪಾಗಿ ಸಂಭ್ರಮಾಚರಣೆ ಮಾಡುವಾಗ, ನಂತರ ವಾಹನ ಚಾಲನೆ ಮಾಡುವವರು ಮದ್ಯಪಾನ ಮಾಡದಿರುವ ಹಾಗೆ ನೋಡಿಕೊಳ್ಳಿ. ನಿಮ್ಮ ಸ್ನೇಹಿತರನ್ನು ಅವರವರ ಮನೆಗಳಿಗೆ ಸುರಕ್ಷಿತವಾಗಿ ಸೇರುವಂತೆ ತನ್ನ ಮತ್ತು ಇತರ ವಾಹನಗಳು ಹಾಗೂ ಪಾದಚಾರಿಗಳ ಸುರಕ್ಷತೆ ಕಾಪಾಡುವಂತೆ, ಹೊಸ ವರ್ಷಾಚರಣೆಯನ್ನು ಅಪಘಾತ ಮುಕ್ತವಾಗಿ ಮಾಡುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular