ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಆಗಮಿಸಿದ್ದು, ಘಟನೆಯಿಂದ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸದ್ಯ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.