ಅಸ್ಸಾಂ: ಅಸ್ಸಾಂನ ತೇಜ್ ಪುರ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿ ಪ್ರಕಾರ ಬೆಳಗ್ಗೆ 5.53ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಕುರಿತು ಮಾಹಿತಿ ಲಭ್ಯವಾಗಿಲ್ಲ. ಭೂಕಂಪದ ಕೇಂದ್ರ ಬಿಂದು ನೆಲದ ಮೇಲ್ಮೈಯಿಂದ 20 ಕಿ.ಮೀ ಆಳದಲ್ಲಿದೆ ಎಂದು ತಿಳಿದುಬಂದಿದೆ.