ಚಾಮರಾಜನಗರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ಸಹಯೋಗದಲ್ಲಿ ಮಿನರ್ವ ಕಂಪ್ಯೂಟರ್ಸ್ ಇವರ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಡಿ. 29ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಜೋಡಿ ರಸ್ತೆಯ ಕರ್ನಾಟಕ ಬ್ಯಾಂಕ್ ಬಿಲ್ಡಿಂಗ್‍ನಲ್ಲಿರುವ ಮಿನರ್ವ ಟೆಕ್ ಸಲ್ಯೂಷನ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಯಾವುದೇ ಪದವಿ ಹೊಂದಿರುವ 18 ರಿಂದ 30ರ ವಯೋಮಿತಿಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರ (ಬಯೋಡೇಟಾ), ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ.ಸಂ 08226-224430 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.