ಮಂಗಳೂರು (ದಕ್ಷಿಣ ಕನ್ನಡ): ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲ, ಅಪಮಾನಕಾರಿ ಹೇಳಿಕೆ ನೀಡಿರುವ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಠಾಣೆಗಳಲ್ಲಿ ದೂರು ದಾಖಲಾಗಿದೆ.
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಳ್ಳಾಲ ಪೌರ ಸಮನ್ವಯ ಸಮಿತಿ ಮಂಗಳೂರಿನ ಉಳ್ಳಾಲ ಠಾಣೆಗೆ ದೂರು ನೀಡಿದೆ.

ಇತ್ತ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಉತ್ತರ ಕ್ಷೇತ್ರ ಸಮಿತಿಯ ವತಿಯಿಂದ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಮುಸ್ಲಿಂ ಮಹಿಳೆಯರ ಬಗ್ಗೆ ಆಶ್ಲೀಲವಾಗಿ ಮಾತನಾಡಿ, ಮುಸ್ಲಿಂ ಸಮಾಜವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಟ್ಲ ಕಾಂಗ್ರೆಸ್ ಮುಸ್ಲಿಂ ಮುಖಂಡರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರನ್ನು ನೀಡಿದೆ.

ಇನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಗಿದೆ.
ಇನ್ನು ಕಲ್ಲಡ್ಕ ಭಟ್ ಎಂಬಾತನ ವಿರುದ್ದ wim ಬಂಟ್ವಾಳ ಕ್ಷೇತ್ರ ಕಾರ್ಯದರ್ಶಿ ಶಮೀಮ ರವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ಅಲ್ಲದೇ ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಪೋಲೀಸ್ ಠಾಣೆಗೆ ದೂರನ್ನು ನೀಡಲಾಗಿದೆ.

ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನೆ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಪಿಸಿಅರ್ ಕರ್ನಾಟಕ ಚಾಪ್ಟರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ.
