Saturday, April 19, 2025
Google search engine

Homeಅಪರಾಧಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್: 13 ಮಂದಿ ಸಜೀವ ದಹನ

ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್: 13 ಮಂದಿ ಸಜೀವ ದಹನ

ಮಧ್ಯಪ್ರದೇಶ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಕನಿಷ್ಠ 13 ಮಂದಿ ಸಜೀವ ದಹನಗೊಂಡ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಗುನಾ-ಆರೋನ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ಸಾವಿನ ಸಂಖ್ಯೆಯನ್ನು ಖಚಿತಪಡಿಸಿದ್ದು, ಜೊತೆಗೆ ಗಾಯಗೊಂಡವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಅದಿಕಾರಿಗಳು ಹೇಳಿದ್ದಾರೆ.

ಅಪಘಾತದ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.

ಘಟನೆಯ ಸಮಯದಲ್ಲಿ ಬಸ್‌ ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಲ್ಲಿ ನಾಲ್ವರು ಬಸ್ಸಿನಿಂದ ಜಿಗಿದು ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ತನಿಖೆಗೆ ಆದೇಶಿಸಿದ್ದು, ಮತ್ತು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

RELATED ARTICLES
- Advertisment -
Google search engine

Most Popular