Monday, April 21, 2025
Google search engine

Homeರಾಜ್ಯಸುದ್ದಿಜಾಲನಾಳೆ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ನಾಳೆ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ನಾಳೆ ಡಿ. ೨೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್‌ಪ್ರಸಾದ್, ಎಂ.ಆರ್. ಮಂಜುನಾಥ, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ನಗರಸಭಾ ಸದಸ್ಯರಾದ ಹೆಚ್.ಎಸ್. ಮಮತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರಿನ ಹೆಸರಾಂತ ಸಾಹಿತಿಗಳು ಮತ್ತು ಅಂಕಣಕಾರ ಬನ್ನೂರು ಕೆ. ರಾಜು ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular