Monday, April 21, 2025
Google search engine

Homeರಾಜಕೀಯಶಾಸಕ ಯತ್ನಾಳ್ ಅವರು ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಸಕ ಯತ್ನಾಳ್ ಅವರು ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ  ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ  ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು.

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು :

ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು.ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದರು.

RELATED ARTICLES
- Advertisment -
Google search engine

Most Popular