ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಕುದ್ರೋಳಿಯ ಭಾರತ್ ಸೋಶಿಯಲ್ ಆ್ಯಂಡ್ ವೆಲ್ವೇರ್ ಟ್ರಸ್ಟ್ ವತಿಯಿಂದ ಡಿ.30ರಂದು ಮಧ್ಯಾಹ್ನ 3ಕ್ಕೆ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ‘ಬಿಎಸ್ ಡಬ್ಲ್ಯುಟಿ ವರ್ಷದ ವ್ಯಕ್ತಿ’ ಪ್ರಶಸ್ತಿ ಪ್ರದಾನ ಹಾಗೂ 2023ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಆಯೋಜಿಸಲಾಗಿದೆ.
ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಭಾರತ್ ಸೋಶಿಯಲ್ ಆ್ಯಂಡ್ ವೆಲ್ವೇರ್ ಟ್ರಸ್ಟ್‌ನ ‘ವರ್ಷದ ವ್ಯಕ್ತಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 25 ಸಾವಿರ ರೂ. ನಗದು ಒಳಗೊಂಡಿದೆ. ಮಂಗಳೂರು ವಿವಿ ಕುಲಪತಿ ಡಾ. ಜಯರಾಜ್ ಅಮಿನ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ಭಾರತ್ ಟ್ರಸ್ಟ್ ಅಧ್ಯಕ್ಷ ಎನ್.ಅಮಿನ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಟ್ರಸ್ಟ್ ವತಿಯಿಂದ ಕಳೆದ 8 ವರ್ಷಗಳಿಂದ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಈ ಬಾರಿ 175 ವಿದ್ಯಾರ್ಥಿಗಳಿಗೆ ತಲಾ ನಾಲ್ಕು ಸಾವಿರ ರೂ. ವಿದ್ಯಾರ್ಥಿ ವೇತನ ವಿತರಿಸಲಾಗುವುದು. ಶಾಲೆಗಳಿಗೆ ತೆರಳಿ ಅಲ್ಲಿ ಮುಖ್ಯ ಶಿಕ್ಷಕರು, ಪ್ರಾಂಶುಪಾಲರ ಶಿಫಾರಸಿನಂತೆ ಅರ್ಹ ಬಡ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಪದಾಧಿಕಾರಿಗಳಾದ ನಿಯಾಝ್ ಪೆರ್ಲ, ಅಬ್ದುಲ್ಲಾ, ಅಶೀರುದ್ದೀನ್ ಆಲಿಯಾ ಉಪಸ್ಥಿತರಿದ್ದರು.