ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಆರ್ ಎಸ್‍ಎ ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಬಂಧನಕ್ಕೆ ಆಗ್ರಹಿಸಿ ಎಸ್.ಡಿ.ಪಿ.ಐ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕೃತಿಗೆ ಚಪ್ಪಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಪರ್ಮನೆಂಟ್ ಗಂಡ ಕೊಟ್ಟಿದ್ದೆ ಮೋದಿ ಸರ್ಕಾರ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮಹಿಳೆಯರನ್ನ ಅವಮಾನಿಸಿದ ಹಾಗೂ ವಿದ್ಯಾರ್ಥಿ ಮುಸ್ಕಾನ್ ಗೆ ಬೆದರಿಕೆ ಹಾಕಿದ ಕಲ್ಲಡ್ಕರನ್ನ ಕೂಡಲೇ ಬಂಧಿಸಿ ಎಂದು ಪ್ರತಿಭಟನಾಕಾರರ ಒತ್ತಾಯಿಸಿದರು.
ಮಂಡ್ಯ ಅಪರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ, ಪೊಲೀಸ್ ಮಹಾನಿರ್ದೇಶಕರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.