Tuesday, April 22, 2025
Google search engine

Homeಅಪರಾಧಚಿತ್ರದುರ್ಗ: ಮನೆಯೊಂದರಲ್ಲಿ ಅಸ್ಥಿಪಂಜರಗಳು ಪತ್ತೆ

ಚಿತ್ರದುರ್ಗ: ಮನೆಯೊಂದರಲ್ಲಿ ಅಸ್ಥಿಪಂಜರಗಳು ಪತ್ತೆ

ಚಿತ್ರದುರ್ಗ: ನಗರದ ಮನೆಯೊಂದರಲ್ಲಿ ಮೂರು ಅಸ್ಥಿಪಂಜರಗಳು ಪತ್ತೆಯಾಗಿದ್ದು, ತಲ್ಲಣ ಸೃಷ್ಟಿಸಿದೆ.

ಚಳ್ಳಕೆರೆ ಗೇಟ್ ಸಮೀಪದಲ್ಲಿ ಜಗನ್ನಾಥ ರೆಡ್ಡಿ ಎಂಬ ನಾಮಫಲಕ ಇರುವ ಪಾಳು ಮನೆಯಲ್ಲಿ ಅಸ್ಥಿಪಂಜರಗಳು ಗುರುವಾರ ರಾತ್ರಿ ಪತ್ತೆಯಾಗಿವೆ.

ಹಲವು ವರ್ಷಗಳಿಂದ ಮನೆಗೆ ಬೀಗ ಹಾಕಲಾಗಿತ್ತು. ಈ ಹಿಂದೆ ಸ್ಥಳೀಯರು ಮನೆಯಿಂದ ವಾಸನೆ ಬರುತ್ತಿದೆ ಎಂದು ಮಾತನಾಡಿಕೊಂಡು ಸುಮ್ಮನಾಗಿದ್ದರು. ಬಡಾವಣೆ ಪೊಲೀಸರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಸ್ಥಿಪಂಜರಗಳು ಇರುವುದು ಖಚಿತವಾಗಿದೆ. ಸಂಪೂರ್ಣ ಕೊಳೆತಿದ್ದು, ಮೂಳೆ ಕಾಣುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳದಲ್ಲಿ ಶ್ವಾನದಳ ಪರಿಶೀಲನೆ ನಡೆಸಿತು.

ಮೂವರು ಅಂದಾಜು ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ನಾಗರಿಕರು ಜಮಾಯಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮನೆ ಮುಂದೆ ಬ್ಯಾರಿಕೇಡ್ ಅಳವಡಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಹಿಂ ಅಹಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular