Saturday, April 19, 2025
Google search engine

Homeರಾಜ್ಯಸುದ್ದಿಜಾಲಕುವೆಂಪು ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿಶ್ವಮಾನವರಾಗಲು ಸಾಧ್ಯ: ಕೆ.ಎಸ್ ಬಸವಂತಪ್ಪ

ಕುವೆಂಪು ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿಶ್ವಮಾನವರಾಗಲು ಸಾಧ್ಯ: ಕೆ.ಎಸ್ ಬಸವಂತಪ್ಪ

ದಾವಣಗೆರೆ: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ರಾಷ್ಟ್ರಕವಿ ಕುವೆಂಪುರವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿಶ್ವಮಾನವರಾಗಲು ಸಾಧ್ಯ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್ ಬಸವಂತಪ್ಪ ತಿಳಿಸಿದರು. ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜರುಗಿದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರಕವಿ ಕುವೆಂಪುರವರ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಜನರು ವೈಚಾರಿಕವಾಗಿ ಯೋಚಿಸದೆ ಮೌಡ್ಯತೆಕಡೆಗೆ ವಾಲುತ್ತಿದ್ದಾರೆ. ನಮ್ಮ ದೇಶದಲ್ಲಿ ದೇವಸ್ಥಾನ, ಮಸೀದಿ, ಚರ್ಚ್‍ಗಳನ್ನು ವೈಭವೀಕರಿಸದೆ ಶಾಲಾ-ಕಾಲೇಜು ಹಾಗೂ ಆಸ್ಪತ್ರೆಗಳನ್ನು ವೈಭವಿಕರಿಸಿದಾಗ ಮಾತ್ರ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ. ಕುವೆಂಪುರವರನ್ನು ಕೇವಲ ದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ ಅವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಒಬ್ಬರು ಇನ್ನೊಬ್ಬರ ಮೇಲೆ ದ್ವೇಷ ಸಾಧಿಸುವುದರಿಂದ ವಿಶ್ವ ಮಾನವರಾಗಲು ಸಾಧ್ಯವಿಲ್ಲ, ಬದಲಾಗಿ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಅಳವಡಿಸಿಕೊಂಡು ದೊಡ್ಡತನವನ್ನು ತೋರ್ಪಡಿಸಬೇಕಾಗಿದೆ. ಯಾವ ದೇಶ ಮಾನವೀಯತೆಯ ಗುಣಗಳನ್ನು ಅಳವಡಿಸಿಕೊಂಡಿದೆಯೊ ಆ ದೇಶ ಪ್ರಪಂಚದಲ್ಲಿ ಉನ್ನತ ಸ್ಥಾನವನ್ನೇರಲಿದೆ. ಕುವೆಂಪುರವರು ಮೌಢ್ಯತೆಗಳನ್ನು ನಿರ್ಮೂಲನೆ ಮಾಡಲು ಹಲವಾರು ವೈಚಾರಿಕ ಕಾದಂಬರಿ, ಕಾವ್ಯ ಹಾಗೂ ವಿಮರ್ಶಾಕ ರಚನೆಗಳನ್ನು ರಚಿಸಿದರೂ ಸಹ ಮಕ್ಕಳನ್ನು ಮೌಢ್ಯತೆ ಕಡೆಗೆ ತಳ್ಳುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಮತಾನಾಡಿ ಕುವೆಂಪುರವರು ನಮ್ಮ ರಾಜ್ಯ ಹಾಗೂ ದೇಶ ಕಂಡ ಶ್ರೇಷ್ಠ ಕವಿಯಾಗಿದ್ದು, ಕನ್ನಡ ಕನ್ನಡ ನಾಡು ಹಾಗೂ ಕನ್ನಡಿಗರಿಗೆ ಸಾಹಿತ್ಯದ ಮೂಲಕ ಅದ್ಭುತ ಕೊಡುಗೆ ನೀಡಿದ್ದಾರೆ. ಮೊಟ್ಟ ಮೊದಲನೇ ಜ್ಞಾನಪೀಠ ಪ್ರಶಸ್ತಿಯು ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಸಂದಿರುವುದು ಕನ್ನಡ ಸಾಹಿತ್ಯದ ಹಿರಿಮೆಯಾಗಿದೆ. ಇವರು ರಚಿಸಿರುವಂತಹ ಕಾವ್ಯ, ಕೃತಿ, ನಾಟಕ, ವಿಮರ್ಶೆಗಳಲ್ಲಿ ವಿಜ್ಞಾನ, ತತ್ವಜ್ಞಾನ, ಮನೋವಿಜ್ಞಾನ ಹಾಗೂ ಜೀವ ವಿಜ್ಞಾನವನ್ನು ಕಾಣಬಹುದು ಎಂದರು.

ನಮ್ಮ ನಾಡಿನ ಸಂಸ್ಕøತಿಯ ಹಿರಿಮೆಯನ್ನು ಇಂದಿನ ಮತ್ತು ಮುಂದಿನ ಪೀಳಿಗೆಗೆ ಕೊಂಡೊಯ್ಯುವಂತಹ ಶೀರ್ಷಿಕೆಯನ್ನು ಕುವೆಂಪುರವರ ಕಾವ್ಯದಲ್ಲಿ ಕಾಣಬಹುದು. ಜನರು ಹುಟ್ಟುತ್ತಲೇ ವಿಶ್ವಮಾನವರಾಗಿ ಸಾಯುವಾಗ ಅಲ್ಪ ಮಾನವರಾಗುವುದಕ್ಕಿಂತ ತಮ್ಮ ಆಚರಣೆಗಳಲ್ಲಿ ಮೌಡ್ಯತೆಗಳನ್ನು ಕೈಬಿಟ್ಟು ವೈಚಾರಿಕವಾಗಿ ಚಿಂತಿಸಬೇಕಾಗಿದೆ ಎಂದರು. ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಯಶೋಧ ಹೆಗ್ಗಪ್ಪ, ಅಪರ ಜಿಲ್ಲಾಧಿಕಾರಿ ಪಿ. ಎನ್ ಲೋಕೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಾಮದೇವಪ್ಪ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ, ಹಿರಿಯ ಪತ್ರಕರ್ತ ಬಿ.ಎನ್ ಮಲ್ಲೇಶ್, ಅವರಗೆರೆ ರುದ್ರಮುನಿ ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular