Sunday, April 20, 2025
Google search engine

Homeರಾಜ್ಯಸುದ್ದಿಜಾಲದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

ದಕ್ಷಿಣ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಚಾಮರಾಜನಗರ: 1960ರ ಮತದಾರರ ನೊಂದಣಿ ನಿಯಮಾವಳಿಗಳ ಅನುಸಾರವಾಗಿ ದಿನಾಂಕ 01-11-2023ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಕರ್ನಾಟಕ ದಕ್ಷಣ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ದಪಡಿಸಿ ಸಾರ್ವಜನಿಕರ ಮಾಹಿತಿಗಾಗಿ ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಸದರಿ ಮತದಾರರ ಪಟ್ಟಿಯು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಕಚೇರಿ, ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ತಹಶೀಲ್ದಾರರ ಕಚೇರಿಗಳಲ್ಲಿ ಪರಿಶೀಲನೆಗಾಗಿ ದೊರೆಯಲಿದೆ. ಅಲ್ಲದೇ ಮತದಾರರ ಪಟ್ಟಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ವೆಬ್‍ಸೈಟ್ ಮತ್ತು ceo.karnataka.gov.in ನಲ್ಲಿ ಲಭ್ಯವಿರುತ್ತದೆ.

ಮತದಾರರ ಪಟ್ಟಿಗಳ ನಿರಂತರ ಕಾಲೋಚಿತಗೊಳಿಸಲು ಪ್ರಜಾಪ್ರತಿನಿಧಿ ಕಾಯ್ದೆ 1950 ಕಲಂ 22 ಮತ್ತು 23ರಡಿ ಮತ್ತು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮ್ಯಾನುಯೆಲ್ ಆನ್ ಎಲೆಕ್ಟರೋಲ್ ರೋಲ್ಸ್-ಅಕ್ಟೊ 2016 ಅಧ್ಯಾಯ 12ರಂತೆ ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶಗಳಿದ್ದು, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-19ರಲ್ಲಿ (ದ್ವಿಪ್ರತಿಯಲ್ಲಿ) ಹಾಗೂ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-18ರಲ್ಲಿ (ದ್ವಿಪ್ರತಿಯಲ್ಲಿ) ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ನೊಂದಣಾಧಿಕಾರಿಗಳು, ನಿಯೋಜಿತ ಅಧಿಕಾರಿಗಳಿಗೆ ಅಗತ್ಯ ದಾಖಲಾತಿಗಳಿಗೆ ಸಲ್ಲಿಸಬಹುದು.

ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಎಲ್ಲ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular