ಮಂಗಳೂರು (ದಕ್ಷಿಣ ಕನ್ನಡ): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ಹೆದ್ದಾರಿ ಬದಿ ಗುಡ್ಡ ಜರಿದು ಬೀಳದಂತೆ ಕಟ್ಟಲಾದ ತಡೆಗೋಡೆಗೆ ಗುದ್ದಿ ಬಳಿಕ ಚರಂಡಿ ಮೇಲೆ ಹತ್ತಿ ನಿಂತುಕೊಂಡಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಚಾಲಕ ಸಹಿತ ಮೂವರು ಮಹಿಳೆಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.