ಮೈಸೂರು: ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಜೀಪ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ.
ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೀಪ್ ಹೆಚ್ ಡಿ ಕೋಟೆಯಿಂದ ಬರುತ್ತಿತ್ತು. ಮೃತಪಟ್ಟವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ದೊರೆತಿದೆ.