ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಜಗಳಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ರಾಕೇಶ್ (21)ನನ್ನು ಬಂಧಿತ ಆರೋಪಿ
ಈತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು, ಪ್ರಸ್ತುತ ತಾಲೂಕಿನ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಹೊಸ ವರ್ಷದ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್ (28)ನ ಮೂಗು ಕಚ್ಚಿ ಗಾಯಗೊಳಿಸಿದ್ದ.
ಘಟನೆಯಿಂದ ಗಾಯಗೊಂಡ ದೀಕ್ಷಿತ್ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ದೀಕ್ಷಿತ್ ನೀಡಿದ ದೂರಿನಂತೆ ಆರೋಪಿ ರಾಕೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ವೇಣೂರು ಉಪನಿರೀಕ್ಷಕ ಶ್ರೀಶೈಲಾ ನೇತೃತ್ವದ ತಂಡ ಜ. 2ರಂದು ಆರೋಪಿ ರಾಕೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.