Monday, April 21, 2025
Google search engine

Homeರಾಜ್ಯಸುದ್ದಿಜಾಲಮಂಡ್ಯದಲ್ಲಿ ನಡೆದ ರಾಗಿಮುದ್ದೆ ಉಣ್ಣುವ ಸ್ಪರ್ಧೆ : ಅರ್ಧ ಗಂಟೆಯಲ್ಲಿ ೧೦ ಮುದ್ದೆ ಗುಳುಂ ಸ್ವಾಹ

ಮಂಡ್ಯದಲ್ಲಿ ನಡೆದ ರಾಗಿಮುದ್ದೆ ಉಣ್ಣುವ ಸ್ಪರ್ಧೆ : ಅರ್ಧ ಗಂಟೆಯಲ್ಲಿ ೧೦ ಮುದ್ದೆ ಗುಳುಂ ಸ್ವಾಹ

ಮಂಡ್ಯ: ಸಿರಿಧಾನ್ಯ ಹಬ್ಬದ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಟಿಕೋಳಿ ಸಾರು ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆಯ ಈರೇಗೌಡ ಬರೋಬ್ಬರಿ ಅರ್ಧ ಗಂಟೆಯಲ್ಲಿ ೨.೭ ಕೆ.ಜಿ. ತೂಕದ ೧೦ ಮುದ್ದೆಯನ್ನು ಗುಳುಂ ಸ್ವಾಹ ಮಾಡುವ ಮೂಲಕ ಅಗ್ರಸ್ಥಾನ ಗಳಿಸಿದರು.

ಸ್ಪರ್ಧಿಗಳಿಗೆ ಮುದ್ದೆ ತಿನ್ನಲು ೩೦ ನಿಮಿಷಗಳ ಕಾಲಾವಕಾಶ ನೀಡಲಾಯಿತು. ಪ್ರತಿ ಮುದ್ದೆಯನ್ನೂ ತೂಕ ಹಾಕಿ ಬಡಿಸಲಾಯಿತು. ಅದರೊಟ್ಟಿಗೆ ಬಿಸಿ ನಾಟಿಕೋಳಿ ಸಾರು, ನೆಂಚಿಕೊಳ್ಳಲು ನಾಟಿ ಕೋಳಿಯ ಮಾಂಸ ಹಾಗೂ ಮೊಟ್ಟೆ ನೀಡಲಾಯಿತು. ಹತ್ತು ಸ್ಪರ್ಧಿಗಳು ಉತ್ಸಾಹದಿಂದ ಮುದ್ದೆ ಮುರಿದರು. ೬೨ ವರ್ಷ ಪ್ರಾಯದ ಹುರಿಮೀಸೆಯ ಸರದಾರ ಈರೇಗೌಡ ಎಲ್ಲರಿಗಿಂತ ಮುಂದಾಗಿ ಮುದ್ದೆ ಮುರಿಯುತ್ತ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ನಿಗದಿತ ಸಮಯದಲ್ಲಿ ಬರೋಬ್ಬರಿ ೧೦ ಮುದ್ದೆ ಉಂಡು ಸೈ ಎನಿಸಿಕೊಳ್ಳುವ ಮೂಲಕ ಪ್ರಶಸ್ತಿಗೆ ಕೊರಳೊಡ್ಡಿದರು.

ಅರಕೆರೆಯವರೇ ಆದ ದಿಲೀಪ್ ಪೈಪೋಟಿ ನೀಡಿದ್ದು, ೧.೬೮೨ ಕೆ.ಜಿ. ಮುದ್ದೆ ತಿನ್ನುವ ಮೂಲಕ ಎರಡನೇ ಸ್ಥಾನ ತಮ್ಮದಾಗಿಸಿಕೊಂಡರು. ಟಿ.ಎಂ. ಹೊಸೂರು ನಿವಾಸಿ ರವೀಂದ್ರ ೧.೫೪೪ ಕೆ.ಜಿ. ಮುದ್ದೆ ತಿನ್ನುವ ಮೂಲಕ ತೃತೀಯ ಸ್ಥಾನ ಪಡೆದರು. ಸ್ಪರ್ಧೆಯ ಮೂರು ಬಹುಮಾನಗಳು ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಾದವು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಅವರೂ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಅವರೂ ಆರು ಮುದ್ದೆ ತಿನ್ನುವ ಮೂಲಕ ಗಮನ ಸೆಳೆದರು.

RELATED ARTICLES
- Advertisment -
Google search engine

Most Popular