Sunday, April 20, 2025
Google search engine

Homeರಾಜ್ಯಯುವನಿಧಿ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ ನಡೆಸಿದ ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್

ಯುವನಿಧಿ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ ನಡೆಸಿದ ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್

ಜ.12ರಂದು ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗಿ

ಶಿವಮೊಗ್ಗ: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯುವನಿಧಿ ಯೋಜನೆಯ ಉದ್ಘಾಟನೆಯನ್ನು ಜನಪರ ಕಾರ್ಯಕ್ರಮವನ್ನಾಗಿ ರೂಪಿಸಲು ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ  ಸಚಿವ ಶರಣಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ  ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಜ.12ರಂದು  ಯುವನಿಧಿ ಯೋಜನೆಯ ನಗದು ಸಂದಾಯ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜನವರಿ 12ರಂದು ಯುವನಿಧಿ ಕಾರ್ಯಕ್ರಮ ಫ್ರೀಡಂ ಪಾರ್ಕ್‍ನಲ್ಲಿ ಲೋಕಾರ್ಪಣೆ ಆಗುತ್ತಿದ್ದು ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಸುಮಾರು ಕಾಲೇಜಿನ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡಲು 5-6 ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಕರತರಲು  ಸೂಚಿಸಿದರು. 

ಸ್ಥಳಕ್ಕೆ ಭೇಟಿ:

ಇದಕ್ಕೂ ಮುನ್ನ  ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಾರ್ಯಕ್ರಮ ನಡೆಯುವ ಫ್ರೀಡಂಪಾರ್ಕ್‍ಗೆ ತೆರಳಿ ಪೂರ್ವಸಿದ್ದತೆ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.  ಜಿಲ್ಲಾ ಉಸ್ತುವಾರಿ ಸಚಿವ  ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶರಣಪ್ರಕಾಶ್ ಪಾಟೀಲ್,  ರಾಜ್ಯದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ನಂತರ ನಗರದ ಕೆಪಿಸಿಸಿ ಭವನದಲ್ಲಿ ಜಿಲ್ಲಾ ಜನಪ್ರತಿನಿಧಿಗಳು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಸದಸ್ಯರು, ಯುವ ಕಾಂಗ್ರೆಸ್ ಅಧ್ಯಕ್ಷರು ಜೊತೆ ಪಾಟೀಲ್ ಸಭೆ ನಡೆಸಿದರು

ಪ್ರಾರಂಭದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಷ್ಟ್ರ ಮಟ್ಟದಲ್ಲಿ ಸದ್ದು  ಮಾಡಿದೆ. ತೆಲಂಗಾಣದಲ್ಲಿ ಈ ಯೋಜನೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅನುಕೂಲವಾಯಿತು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾವು ಹೆಚ್ಚಿನ ಸ್ಥಾನ ಗೆಲ್ಲಬೇಕು. ಕಾರ್ಯಕ್ರಮಯಸಸ್ವಿಯಾಗಿಲು ಜಿಲ್ಲಾ ಕಾಂಗ್ರೆಸ್ ಮುಖಂಡರ ಅಗತ್ಯತೆಯನ್ನು ಒತ್ತಿ ಹೇಳಿದರು. ಇದಕ್ಕೆ ಸಭೆಯಲ್ಲಿದ್ದ ಎಲ್ಲರೂ ಕೂಡ  ಜಯಕಾರದ ಘೋಷಣೆ ಕೂಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದಾಗಿ ಶಪಥ  ಮಾಡಿದರು.

RELATED ARTICLES
- Advertisment -
Google search engine

Most Popular