Monday, April 21, 2025
Google search engine

Homeರಾಜ್ಯಸುದ್ದಿಜಾಲದೇಶವನ್ನು ವಿಶ್ವದಲ್ಲೇ ಅತ್ಯುತ್ತಮ ಸ್ಥಾನದಲ್ಲಿಡಲು ಎಲ್ಲರ ಸಹಕಾರ ಅಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ದೇಶವನ್ನು ವಿಶ್ವದಲ್ಲೇ ಅತ್ಯುತ್ತಮ ಸ್ಥಾನದಲ್ಲಿಡಲು ಎಲ್ಲರ ಸಹಕಾರ ಅಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಧಾರವಾಡ : ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವೆಂದರೆ ಯುವಕರು. ಭಾರತ ವಿಶ್ವಗುರುವಾಗಲು ಇಂದಿನ ಯುವ ಸಮುದಾಯವೇ ಕಾರಣ. ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಅವರು ಇಂದು ಜ. 3 ಕರ್ನಾಟಕ ಕಾಲೇಜಿನ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಕಲಾ ಮಹಾವಿದ್ಯಾಲಯದ ಪ್ರವಾಸೋದ್ಯಮ ಅಧ್ಯಯನ ವಿಭಾಗ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಮೂರು ದಿನಗಳ ಸಾಂಸ್ಕೃತಿಕ ಉತ್ಸವ- ಸಾರ್ಥಹ-2024 ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ. ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ದೇಶ ಸ್ವಾವಲಂಬನೆಯತ್ತ ಸಾಗುತ್ತಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಮತ್ತು ದೇಶವನ್ನು ವಿಶ್ವದ ಅತ್ಯುತ್ತಮ ಸ್ಥಾನದಲ್ಲಿ ಇರಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ. ಭಾರತವು ವಿಭಿನ್ನ ಸಂಸ್ಕೃತಿಗಳಿಂದ ಕೂಡಿದ ವೈವಿಧ್ಯಮಯ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆ ಈ ರಾಷ್ಟ್ರದ ಶಕ್ತಿಯಾಗಿ ಉಳಿದಿದೆ ಎಂದರು. ಜೀವನದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ. ಸೋಲು ಗೆಲುವು ಎಲ್ಲವೂ ಸರ್ವೇಸಾಮಾನ್ಯ, ಆತ್ಮವಿಶ್ವಾಸ, ದೃಢಸಂಕಲ್ಪದಿಂದ ಅಸಾಧ್ಯವಾದುದನ್ನು ಸಾಧಿಸಬಹುದು ಎಂದು ಸಚಿವರು ಹೇಳಿದರು.

ಖ್ಯಾತ ನಟ ಹಾಗೂ ನಿರ್ದೇಶಕ ಡಾ.ಯಶವಂತ ಸರ್ದೇಶ್ ಪಾಂಡೆ ಮಾತನಾಡಿದರು. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಕೆ.ಬಿ.ಗುಡಸಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಲಾ ಕಾಲೇಜಿನ ಪ್ರಭಾರಿ ಪ್ರಾಂಶುಪಾಲೆ ಡಾ.ಮಂಜುಳಾ ಚಲವಾದಿ, ಕರ್ನಾಟಕ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುಳಿ ಸಾಳುಂಕೆ, ಪ್ರವಾಸೋದ್ಯಮ ಇಲಾಖೆಯ ಸಂಯೋಜಕ ಡಾ.ಕೆ.ಜಗದೀಶ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ವೀರೇಂದ್ರ ಯಾದವ, ವಿಶ್ರಾಂತ ಪ್ರಾಧ್ಯಾಪಕ ಎಸ್.ರಾಜಶೇಖರ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಕಲಾ ಕಾಲೇಜಿನಲ್ಲಿ ಚಿತ್ತಾರ ಆರ್ಟ್ಸ್ ಕ್ಲಬ್ ಆಯೋಜಿಸಿದ್ದ ಮೂರು ದಿನಗಳ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದ ಸಚಿವರು, ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular