ಮಂಗಳೂರು(ದಕ್ಷಿಣ ಕನ್ನಡ): ಖಾಸಗಿ ಬಸ್‌ವೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ದ್ವಾರದ ಬಳಿ ನಡೆದಿದೆ.
ಘಟನೆಯಿಂದ ಸುಮಾರು 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಖಾಸಗಿ ಬಸ್ ಶುಭಲಕ್ಷ್ಮೀ ಕೈಕಂಬದಿಂದ ಅಡ್ಡೂರು ಕಡೆ ಸಂಚರಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.