Sunday, April 20, 2025
Google search engine

Homeಸ್ಥಳೀಯಮೈಸೂರಿನಲ್ಲಿ ರೇಷ್ಮೆ ಸೀರೆಗಳ ಪ್ರದರ್ಶನ: ಸಿಲ್ಕ್ ಇಂಡಿಯ-೨೦೨೪

ಮೈಸೂರಿನಲ್ಲಿ ರೇಷ್ಮೆ ಸೀರೆಗಳ ಪ್ರದರ್ಶನ: ಸಿಲ್ಕ್ ಇಂಡಿಯ-೨೦೨೪

ಮೈಸೂರು : ಸಂಕ್ರಾಂತಿ ಹಬ್ಬದ ಪ್ರಯುಕ್ತ ನಗರದ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ೬ ದಿನಗಳ ಸಿಲ್ಕ್ ಇಂಡಿಯ-೨೦೨೪ ರೇಷ್ಮೇ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಹೆಸರಾಂತ ಫ್ಯಾಷನ್ ಡಿಸೈನರ್ ಜಯಂತಿ ಬಲ್ಲಾಳ್ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ.

೬ ದಿನಗಳ ಕಾಲ ಇಲ್ಲಿ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂ ವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳ ೪೫ ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ನಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದರು. ಭಾರತವು ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಮುಂಚೂಣಿಯಲ್ಲಿದ್ದು, ಇಲ್ಲಿನ ರೇಷ್ಮೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ದೇಶದಲ್ಲಿ ವಾಯುಗುಣ ಮತ್ತು ನಿಸರ್ಗಕ್ಕೆ ಅನುಗುಣವಾಗಿ ೪ ವಿವಿಧ ಪ್ರಭೇದದ ರೇಷ್ಮೆಗಳಿದ್ದು ಅವುಗಳಲ್ಲಿ ತಸ್ಸರ್, ಎರಿ, ಮುಲ್ಬಾರಿ ಮತ್ತು ಮುಗಾ ರೇಷ್ಮೆಯ ಪ್ರಮುಖವಾಗಿದ್ದು, ಇದರಲ್ಲಿ ತಸ್ಸರ್ ಮತ್ತು ಮುಗಾ ರೇಷ್ಮೆಯು ಒಂದು ನೈಜವಾದ ಹಾಗೂ ಉಷ್ಣವಲಯದಲ್ಲಿ ಬೆಳೆಯುವ ವನ್ಯ ರೇಷ್ಮೆ ಹಾಗೂ ಸಾವಯವ (ಆರ್ಗಾನಿಕ್) ರೇಷ್ಮೆಯಾಗಿದೆ. ತಸ್ಸರ್ ಮತ್ತು ಮುಗಾ ರೇಷ್ಮೆ ಉತ್ಪಾದನೆಯಲ್ಲಿ ಅಸ್ಸಾಂ, ಬಿಹಾರ್ ಮತ್ತು ಛತ್ತಿಘಡ್ ರಾಜ್ಯಗಳು ದೇಶದಲ್ಲಿ ಪ್ರಮುಖವಾಗಿದೆ.

ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಕಡಿಮೆ ದರದಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ರೇಷ್ಮೇ ವಸ್ತ್ರಗಳನ್ನು ಕೊಡುವುದು ಸಂಸ್ಥೆಯ ಉದ್ಧೇಶವಾಗಿದೆ ಎಂದರು.

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಆರ್ನಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್ ಮತ್ತು ಸೀರೆಗಳು, ಬಾಗಲ್ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್‌ಉಳ್ಳ ಮುಲ್ಬಾರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್ಗಳು ಮತ್ತು ಬೆಡ್ಶೀಟ್ಗಳನ್ನು ಈ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲ್ಲಿ ದೊರಕುತ್ತಿವೆ ಎಂದರು.

RELATED ARTICLES
- Advertisment -
Google search engine

Most Popular