Monday, April 21, 2025
Google search engine

Homeಅಪರಾಧಹಿರಿಯ ಬಿಜೆಪಿ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನ

ಹಿರಿಯ ಬಿಜೆಪಿ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನ

ಉಡುಪಿ: ಹಿರಿಯ ಬಿಜೆಪಿ ಮುಖಂಡ,  ಶಾರದಾ  ಇಂಟರ್‌ ನ್ಯಾಷನಲ್ ಹೋಟೆಲ್ ಮಾಲೀಕ ಬಿ.ಸುಧಾಕರ್ ಶೆಟ್ಟಿ (72) ಅವರು ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು.

2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. 2013ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಅವರು ಸ್ಪರ್ಧಿಸಲು ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಅನುಭವಿಸಿದ್ದರು.

RELATED ARTICLES
- Advertisment -
Google search engine

Most Popular