ಮದ್ದೂರು: ಮದ್ದೂರಿನ ಸೋಮನಹಳ್ಳಿ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತಹಶೀಲ್ದಾರ್ ಸೋಮಶೇಖರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಸತಿ ಶಾಲೆಯ ಊಟದ ಕೋಣೆಗೆ ತೆರಳಿ ಖುದ್ದು ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳ ಬಳಿ ತೆರಳಿ ಆಹಾರದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಶಾಲಾ ಕೊಠಡಿಗೆ ಪ್ರವೇಶಿಸಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ವಿದ್ಯಾರ್ಥಿಗಳು ಯಾರೂ ಕೂಡ ತಮ್ಮಲ್ಲಿರುವ ಪ್ರಶ್ನೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗಬಾರದು. ಶಿಕ್ಷಕರನ್ನು ಕೇಳುವ ಮೂಲಕ ಪ್ರಶ್ನೆಗೆ ಉತ್ತರ ಪಡೆದುಕೊಳ್ಳಬೇಕು.
ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳಾದ ನೀವು ಮುಂದಿನ ದಿನಗಳಲ್ಲಿ ಎದುರಿಸಬೇಕು. ಈಗಿನಿಂದಲೇ ನೀವು ನಿಮ್ಮ ಮನಸ್ಸಿನಲ್ಲಿ ಗುರಿ ಇಟ್ಟುಕೊಂಡು ಸಾಧಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಆತ್ಮಸ್ಥೈರ್ಯ ತುಂಬಿದರು.
ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ. ನಿಮ್ಮ ಮಕ್ಕಳಂತೆ ಅವರನ್ನು ಪೋಷಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.