ಬಳ್ಳಾರಿ: ಜಿಲ್ಲೆಯಲ್ಲಿ ಚೊಚ್ಚಲ ಬಾರಿಗೆ ಜ.06 ಮತ್ತು 07ರಂದು ನಡೆಯುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಪ್ರಖ್ಯಾತ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ರಘು ದಿಕ್ಷೀತ್ ಅವರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಸಚಿವ ಸಂಪುಟದ ಸಚಿವರುಗಳು, ಕಲಾವಿದರು ಮತ್ತು ರಾಜ್ಯದ 31 ಜಿಲ್ಲೆಗಳಿಂದಲೂ ಯುವಕ ಯುವತಿಯರು ಭಾಗವಹಿಸಲಿದ್ದಾರೆ.
ಜ.06ರಂದು ಸಂಜೆ 06 ಗಂಟೆಗೆ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆ ಸಮಾರಂಭ ನಡೆಯಲಿದೆ. ನಂತರದಲ್ಲಿ ನಾಡು – ನುಡಿ ಮತ್ತು ಸಂಸ್ಕøತಿಯನ್ನು ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಮನೋರಂಜನೆ ಕಾರ್ಯಕ್ರಮಗಳು ಇರಲಿವೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.