ಮಂಡ್ಯ: ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ವತಿಯಿಂದ ಜನವರಿ-೨೦೨೪ ರ ಮಾಹೆಯ ನಾಳೆ ಜ.೫ ರಿಂದ ಜನವರಿ ೨೪ ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಜ.೫ ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, ಜನವರಿ ೦೯ ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, ಜನವರಿ ೧೦ ರಂದು ಕೆ.ಆರ್ ಪೇಟೆ ತಾಲ್ಲೂಕು ಆಸ್ಪತ್ರೆ, ಜನವರಿ ೧೧ ರಂದು ಪಾಂಡವಪುರ ಉಪವಿಭಾಗ ಆಸ್ಪತ್ರೆ, ಜನವರಿ ೧೨ ರಂದು ಕೆ.ಎಂ ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, ಜನವರಿ ೧೬ ರಂದು ಪಾಂಡವಪುರ ಉಪ ವಿಭಾಗ ಆಸ್ಪತ್ರೆ, ಜನವರಿ ೧೭ ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, ಜನವರಿ ೧೮ ರಂದು ಮದ್ದೂರು ತಾಲ್ಲೂಕು ಆಸ್ಪತ್ರೆ, ಜನವರಿ ೧೯ ರಂದು ಬಸರಾಳು ಪ್ರಾಥಮಿಕ ಆರೋಗ್ಯ ಕೇಂದ್ರ, ಜನವರಿ ೨೦ ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, ಜನವರಿ ೨೩ ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ ೧ ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ, ಜನವರಿ ೨೪ ರಂದು ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.