ಕೆ.ಆರ್.ಪೇಟೆ: ಕೆ ಆರ್ ಪೇಟೆ ತಾಲ್ಲೋಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿಕಾವಲು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಭಾಗ್ಯಮ್ಮ ಸ್ವಾಮೀಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಹಿಂದಿನ ಅಧ್ಯಕ್ಷರಾಗಿದ್ದ ಅಧ್ಯಕ್ಷೆ ಚಂದ್ರಕಲಾ ಬಸವರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು.ಅಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿ ಭಾಗ್ಯಮ್ಮ ಸ್ವಾಮೀಗೌಡ ಹೊರತುಪಡಿಸಿ ಉಳಿದ ಯಾವ ಸದಸ್ಯರು ನಾಮಪತ್ರವನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಭಾಗ್ಯಮ್ಮ ಸ್ವಾಮೀಗೌಡ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರು ಘೋಷಣೆಮಾಡಿದರು.
ನೂತನ ಅಧ್ಯಕ್ಷೆ ಭಾಗ್ಯಮ್ಮ ಸ್ವಾಮೀಗೌಡ ಮಾತನಾಡಿ ನನ್ನ ಮೇಲೆ ವಿಶ್ವಾಸವಿಟ್ಟು ಗ್ರಾಪಂ ಅಧ್ಯಕ್ಷೆಯಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ, ನನ್ನ ಅಧಿಕಾರವಧಿಯಲ್ಲಿ ಯಾವುದೇ ಚ್ಯುತಿ ಬಾರದಂತೆ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರು ರಸ್ತೆ, ಚರಂಡಿ ಬೀದಿದೀಪ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ನೂತನ ಅಧ್ಯಕ್ಷರಾಗಿ ಭಾಗ್ಯಮ್ಮ ಸ್ವಾಮಿಗೌಡ ಆಯ್ಕೆಯಾಗುತ್ತಿದ್ದಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಮಾತನಾಡಿ ಗ್ರಾ. ಪಂ. ಮಾಜಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಕರೀಶೆಟ್ಟಿ ಆಡಳಿತ ಮಂಡಳಿಯ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿ ವ್ಯಾಪ್ತಿ ಬರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವುದು ಮುಖೇನ ಉತ್ತಮ ಆಡಳಿತವನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪುವ ನಿಟ್ಟಿನಲ್ಲಿ ಪ್ರಾಮಾಣಿಕ ಆಡಳಿತ ನೀಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಅಕ್ಕಿಹೆಬ್ಬಾಳು ರಘು,ಗ್ರಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್,ಸದಸ್ಯರುಗಳಾದ ಎ ರಾಜು.ಜಿ. ಜೆ.ವೆಂಕಟೇಶ್,ಚಂದ್ರಕಲಾ ಬಸವರಾಜು,ವೇದಾಂಬಬೋರಲಿಂಗಗೌಡ,ಸುಮ ಪ್ರಶಾಂತ್,ರೂಪ ಕುಮಾರ್,ಮುಜೀಹಿದ್ ಖಾನ್,ಸಾಕಮ್ಮ,ಮುಖಂಡರುಗಳಾದ,ಜೆಡಿಎಸ್ ಅಲ್ಪ ಸಂಖ್ಯಾತರ ತಾಲೂಕು ಅಧ್ಯಕ್ಷ ತನ್ವೀರ್ ಪಾಷಾ,ಗಂಜಿಗೆರೆ ರಾಮಕೃಷ್ಣೇಗೌಡ,ಬಸವರಾಜು, ಬೋರಲಿಂಗೇಗೌಡ,ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್,ಕಾರ್ಯದರ್ಶಿ ಇಮ್ರಾನ್ ಷರೀಫ್,ಸಿಬ್ಬಂದಿ ಬಿ.ಅಶೋಕ್ ಸೇರಿದಂತೆ ಉಪಸ್ಥಿತರಿದ್ದರು.