ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ ಖಾಲಿಯಲ್ಲಿ ಶುಕ್ರವಾರ ಜಾರಿ ನಿರ್ದೇಶನಾಲಯ ತಂಡದ ಮೇಲೆ ದಾಳಿ ನಡೆಸಲಾಗಿದೆ.
ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ತಂಡವು ಸ್ಥಳಗಳಿಗೆ ರೈಡ್ ನಡೆಸಿತ್ತು. ತೃಣಮೂಲ ನಾಯಕ ಶಹಜಹಾನ್ ಶೇಖ್ ಅವರ ನಿವಾಸವನ್ನು ಸಮೀಪಿಸುತ್ತಿದ್ದಂತೆ ತಂಡವೊಂದು ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿತು.
ವಿವರಗಳ ಪ್ರಕಾರ, 200 ಕ್ಕೂ ಹೆಚ್ಚು ಸ್ಥಳೀಯರು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಸಶಸ್ತ್ರ ಅರೆಸೇನಾ ಪಡೆಗಳನ್ನು ಸುತ್ತುವರೆದರು. ಪ್ರಚೋದಿತ ಗುಂಪು ಸರ್ಕಾರಿ ಅಧಿಕಾರಿಗಳ ವಾಹನಗಳನ್ನೂ ಧ್ವಂಸಗೊಳಿಸಿದೆ.
ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್, ರೋಹಿಂಗ್ಯಾಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಏನು ಮಾಡುತ್ತಿದ್ದಾರೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇವರೆಲ್ಲರ ವಿರುದ್ಧವೂ ದೂರು ಹಾಗೂ ಭ್ರಷ್ಟಾಚಾರದ ಆರೋಪವಿದೆ. ಸ್ವಾಭಾವಿಕವಾಗಿ ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ ಎಂದರು.