ಬಳ್ಳಾರಿ: ತೋಟಗಾರಿಕೆ ಕ್ಷೇತ್ರವು ಆರ್ಥಿಕತೆಗೆ ಕೊಡುಗೆ ನೀಡುತ್ತದೆ, ಉತ್ತಮ ದೇಶಪ್ರೇಮವನ್ನು ನೀಡುತ್ತದೆ. ಉದ್ಯಾನವನದಿಂದ ಪರಿಸರ ಸ್ವಚ್ಛ ಹಾಗೂ ಸುಂದರವಾಗುತ್ತದೆ ಎನ್ನುತ್ತಾರೆ ಬಳ್ಳಾರಿ ಪಾಲಿಕೆ ಉಪಮೇಯರ್ ಬಿ.ಜಾನಕಿ. ತೋಟಗಾರಿಕೆ ಇಲಾಖೆ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ತೋಟಗಾರಿಕೆ ಅಭಿವೃದ್ಧಿ ಯೋಜನೆ ಕುರಿತು ಇತ್ತೀಚೆಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಂಬರುವ ದಿನಗಳಲ್ಲಿ ಬೇಸಿಗೆ ಆರಂಭವಾಗಲಿದೆ. ಬಿಸಿಲ ನಾಡು ಬಳ್ಳಾರಿಯಲ್ಲಿ ಗಿಡಗಳನ್ನು ನೆಟ್ಟು ಆರೈಕೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿ.ಪಂ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ರತ್ನಪ್ರಿಯ ಯರಗಲ್ಲ ಮಾತನಾಡಿ, ಇಂದಿನ ದಿನಗಳಲ್ಲಿ ತೋಟಗಾರಿಕಾ ಕ್ಷೇತ್ರದಲ್ಲಿ ಆಗಿರುವ ಆವಿಷ್ಕಾರಗಳ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸವಾಗಬೇಕು.
ತೋಟಗಾರಿಕೆ, ವಿಭಾಗಗಳು, ಕೈತೋಟ ಮತ್ತು ತಾರಾಸಿ ತೋಟಗಾರಿಕೆ, ಹೈಡ್ರೋಪೆನಿಕ್ಸ್, ಸಸ್ಯಾಹಾರಿ ಅಭಿವೃದ್ಧಿಗೆ ವೃತ್ತಿ ಆಧಾರಿತ ಮೂಲ ವಿಷಯ ಸೇರಿದಂತೆ ವಿದ್ಯಾರ್ಥಿಗಳಿಗೆ ಮಹತ್ವ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಾರ್ವಜನಿಕ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಶಮೀಮ್ ಜಾರಾ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಕೆ. ಈರಮ್ಮ, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಸುಲೇಖಾ, ಉಪ ಪ್ರಾಂಶುಪಾಲರಾದ ಜಾಯ್ ಡೆಬೋರಾ, ಬಳ್ಳಾರಿ ತಾಲೂಕಿನ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ನಯ್ ಮುರ್ ರೆಹಮಾನ್ ಉಪಸ್ಥಿತರಿದ್ದರು.