ತುಮಕೂರು: ತುಮಕೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತಿಪಟೂರು ಶಾಸಕ ಕೆ.ಷಡಕ್ಷರಿ ವಿರುದ್ಧ ಸ್ವತಃ ಕಾಂಗ್ರೆಸ್ ಮುಖಂಡ ಲೋಕೇಶ್ವರ್ ರಿಂದ ಭ್ರಷ್ಟಾಚಾರದ ಆರೋಪ ಮಾಡಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಲೋಕೇಶ್ವರ್, ನಗರಾಭಿವೃದ್ಧಿಯಿಂದ ಲೇಔಟ್ ಅಪ್ರೂವಲ್ ಮಾಡಲು ಶಾಸಕರಿಗೆ ಲಂಚ ಕೊಡಬೇಕು. ತಿಪಟೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪ್ರತಿ ಎಕರೆಗೆ 2 ಲಕ್ಷ ರೂ ಲಂಚ ನಿಗದಿ ಮಾಡಿದ್ದಾರೆ. ಅದರಲ್ಲಿ ಒಂದು ಲಕ್ಷ ರೂ ಶಾಸಕರಿಗೆ ತಲುಪುತ್ತದೆ ಎಂದು ಸ್ವಪಕ್ಷೀಯ ಶಾಸಕರ ವಿರುದ್ಧವೇ ಬಾಂಬ್ ಸಿಡಿಸಿದ್ದಾರೆ.
ಲೋಕೇಶ್ವರ್ ಹೇಳಿಕೆ ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಶಾಸಕ ಷಡಕ್ಷರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕಾರ್ಯಕರ್ತರಿಗೆ ಸ್ಪಂದಿಸದ ಶಾಸಕರ ವಿರುದ್ಧ ನೊಂದ ಕಾಂಗ್ರೆಸ್ ಕಾರ್ಯಕರ್ತರು ತಿಪಟೂರು ನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ.