Sunday, April 20, 2025
Google search engine

Homeರಾಜ್ಯಎಡದಂಡೆ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು : ಸಚಿವ ಎಸ್...

ಎಡದಂಡೆ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು : ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ.

ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯೂಸೆಕ್ಸ್ ಮತ್ತು ಎಡದಂಡ ನಾಲೆಗೆ 380 ಕ್ಯೂಸೆಕ್ಸ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದಾಗಿದೆ.

ಪ್ರಸ್ತುತ ಚಳಿ ಇದ್ದು ವಾತಾವರಣ ತಂಪಿದೆ. ಮಾರ್ಚ್ ನಂತರ ಬೇಸಿಗೆ ಹೆಚ್ಚಲಿದ್ದು, ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಕಷ್ಟವಾಗಬಹುದು. ಆದ್ದರಿಂದ ಕಟ್ಟಕಡೆಯ ಅಚ್ಚುಕಟ್ಟುದಾರರ ಅನುಕೂಲವನ್ನೂ ಪರಿಗಣಿಸಿ ಈಗ ಸ್ವಲ್ಪ ತಡವಾಗಿ ನೀರು ಹರಿಸುವ ಬಗ್ಗೆ ಅಧಿಕಾರಿಗಳು, ರೈತರು ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು. ಹಾಗೂ ನೀರಿನ ಅಭಾವವಿರುವ ಕಾರಣ ಪ್ರಸ್ತುತ ರೈತರು ಭತ್ತ ಬೆಳೆಯದಿದ್ದರೆ ಒಳಿತು ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ದಾವಣಗೆರೆ ಜಿಲ್ಲಾಧಿಕಾರಿ ವೆಂಕಟೇಶ್, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾ ನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ. ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಇಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

RELATED ARTICLES
- Advertisment -
Google search engine

Most Popular