Monday, April 21, 2025
Google search engine

Homeಅಪರಾಧಕಾನೂನುಕೆಆರ್ ​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ

ಕೆಆರ್ ​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಕೆಆರ್ ​​​​ಎಸ್ ಅಣೆಕಟ್ಟೆಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ.

ಕೆಆರ್​​​​ ಎಸ್ ಡ್ಯಾಂ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿಬಂದಿದೆ. ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ ಎಂ. ವಿಶ್ವೇಶ್ವರಯ್ಯರ ಕೊಡುಗೆ ಬಹಳಷ್ಟಿದೆ ಎಂದು ನ್ಯಾಯಪೀಠ ಹೇಳಿದೆ.

ಕೆಆರ್ ​​​​ಎಸ್ ಡ್ಯಾಂ ನಿರ್ಮಾಣಕ್ಕೆ ಜನರು ರಕ್ತ, ಬೆವರು ಹರಿಸಿದ್ದಾರೆ. ತೀ.ತಾ. ಶರ್ಮರ ಸರ್.ಎಂ. ವಿಶ್ವೇಶ್ವರಯ್ಯ ಕುರಿತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಕೆಆ ರ್​​​​ಎಸ್ ​ಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ. ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ. ಆದರೆ ಕೆಆರ್​​​​ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ. ಅಣೆಕಟ್ಟೆಗೆ ತೊಂದರೆಯಾದರೆ ಆಗುವ ಅನಾಹುತಗಳ ಅರಿವಿದೆಯೇ? ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಕೆಆರ್ ​​​​ಎಸ್ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

RELATED ARTICLES
- Advertisment -
Google search engine

Most Popular