ಚಿಕ್ಕಬಳ್ಳಾಪುರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾದ ಮಾಲೂರು ಶಾಸಕ ನಂಜೇಗೌಡ ಹಾಗೂ ಕೆಲ ನಿರ್ದೇಶಕರ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಹಗರಣ ನಡೆದಾಗ ಏಕೆ ಇಡಿ ದಾಳಿ ಆಗಲಿಲ್ಲ ಎಂದು ಖಾರವಾಗಿಯೆ ಪ್ರಶ್ನಿಸಿದರು.
ಕೋಚಿಮುಲ್ ನಲ್ಲಿ ಏನಾಗಿದೆಯೆಂದು ಇಡಿ ದಾಳಿ ನಡೆಸಲಾಗಿದೆ ಎಂದು ಪ್ರಶ್ನಿಸಿದ ಅವರು, ಇಡಿ ದಾಳಿಯ ಹಿಂದೆ ರಾಜಕೀಯ ಪ್ರೇರಿತ ಎಂಬುದು ಎಲ್ಲರಿಗೂ ಗೊತ್ತಿದೆಯೆಂದು ಕೇಂದ್ರ ಸರ್ಕಾರದ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ನಾವು ಎಲ್ಲಾ ದಾಳಿಗಳನ್ನು ಎದುರಿಸಲು ಸಿದ್ದರಿದ್ದೇವೆ ಎಂದರು.