Monday, April 21, 2025
Google search engine

Homeರಾಜ್ಯಶಿವಮೊಗ್ಗ: ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಯಿಂದ 18 ವರ್ಷದ ಯುವತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ‌ ಬೊಪ್ಪನಮನೆ ಗ್ರಾಮದಲ್ಲಿ ನಡೆದಿದೆ.

ಆ ಮೂಲಕ ಇದು ಮಂಗನ ಕಾಯಿಲೆಗೆ ಈ ವರ್ಷ ಮೃತಪಟ್ಟ ಮೊದಲ ಪ್ರಕರಣವಾಗಿದೆ. ಬೊಪ್ಪನೆಮನೆ ಗ್ರಾಮದ ನಿವಾಸಿ ಅನನ್ಯ ಮೃತ ಯುವತಿ.

ಚಳಿ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ದಿನ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಗ್ರಾಮದಲ್ಲಿ ಕೆಎಫ್​ಡಿ ಕುರಿತು ಎಲ್ಲ ಮುಂಜಾಗೃತೆ ವಹಿಸಲಾಗಿದೆ. ಜ್ವರ ಕಂಡು ಬಂದ ತಕ್ಷಣ ಅವರಿಗೆ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯ ವರೆಗೆ 2911 ಕೆಎಫ್​ಡಿ ಪರೀಕ್ಷೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular