Sunday, April 20, 2025
Google search engine

Homeಸ್ಥಳೀಯಮತದಾನದ ಪ್ರಮಾಣವನ್ನು ಹೆಚ್ಚಿಸಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ: ಕೂರ್ಮಾರಾವ್

ಮತದಾನದ ಪ್ರಮಾಣವನ್ನು ಹೆಚ್ಚಿಸಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ: ಕೂರ್ಮಾರಾವ್

ಮೈಸೂರು: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಕೂರ್ಮರಾವ್ ರವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಗರ ಪ್ರದೇಶದ ಕ್ಷೇತ್ರಗಳಾದ ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿದೆ. ಈ ಕ್ಷೇತ್ರಗಳ ಯಾವ ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಎಂಬದನ್ನು ಗುರುತಿಸಿ ಆ ವ್ಯಾಪ್ತಿಯಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿ ಎಂದರು.

ಮತದಾನ ಕಡಿಮೆಯಾಗಲು ಕೆಲವರು ಬೇರೆ ಪ್ರದೇಶಗಳಲ್ಲಿ ವಲಸೆ ಹೋಗಿರುತ್ತಾರೆ ಅವರ ಹೆಸರನ್ನು ಅವರು ಇರುವ ಮತಗಟ್ಟೆಗೆ ಫಾರಂ 8 ನ್ನು ನೀಡಿ ಶಿಫ್ಟ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ. ಇದರಿಂದ ಅವರು ಇರುವ ಕಡೆ ಮತದಾನ ಮಾಡಲು ಅನುಕೂಲವಾಗುತ್ತದೆ. ಚುನಾವಣಾ ಸಾಕ್ಷರತಾ ಕ್ಲಬ್ ಗಳ ಮೂಲಕ ವ್ಯವಸ್ಥಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು ಮತದಾನದ ಮಹತ್ವ ಕುರಿತು ಒಂದು ನಿಮಿಷದ ಕಿರು ಚಿತ್ರಗಳ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಬಹುಮಾನಗಳನ್ನು ನೀಡಿ. ಉತ್ತಮ ಕಿರು ಚಿತ್ರಗಳನ್ನು ಮತದಾನ ಜಾಗೃತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ ಅವರು ಮಾತನಾಡಿ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ 822 ಚುನಾವಣಾ ಸಾಕ್ಷರತಾ ಕ್ಲಬ್ ಗಳನ್ನು ಸ್ಥಾಪಿಸಲಾಗಿದೆ. ಈ ಸಾಕ್ಷರತಾ ಕ್ಲಬ್ ಗಳ ಮೂಲಕ ಮತದಾನ ಕುರಿತು ಜಾಥಾ, ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬಿ ಎಲ್ ಒ ಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular