Saturday, April 19, 2025
Google search engine

Homeಅಪರಾಧಕಾನೂನುಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ವಾಹನ ಸವಾರರ ಡಿಎಲ್ ಅಮಾನತಿಗೆ ಸೂಚನೆ

ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ವಾಹನ ಸವಾರರ ಡಿಎಲ್ ಅಮಾನತಿಗೆ ಸೂಚನೆ

ಬೆಂಗಳೂರು: ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವಂತೆ ಎಲ್ಲಾ ಟ್ರಾಫಿಕ್ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಆದರು ಕೆಲವು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬಂದಿದೆ.

ಇಂತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತು ಮಾಡಲು ನಿರ್ಧರಿಸಿದ್ದಾರೆ. 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸಂಚಾರಿ ಪೊಲೀಸರು ಬೇರೆಬೇರೆ ರಾಜ್ಯ ಮತ್ತು ರಾಜ್ಯದ ಜಿಲ್ಲಾ ಸಾರಿಗೆ ಕಚೇರಿಗೆ ಕಳುಹಿಸಲಾಗಿದ್ದು, ಈ ಪೈಕಿ 711 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗಿದೆ. ಉಳಿದ 2263 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತ್ತುಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.

RELATED ARTICLES
- Advertisment -
Google search engine

Most Popular